ಪ್ರಮುಖ ಸುದ್ದಿ

ಪ್ರತಿಷ್ಠಿತ “ಶ್ರೀ ಮಹರ್ಷಿ ವಾಲ್ಮೀಕಿ” ಪ್ರಶಸ್ತಿಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಆಯ್ಕೆ

ರಾಜ್ಯ(ಬೆಂಗಳೂರು)ಅ.23:-  ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸರಕಾರ ನೇಮಿಸಿದ್ದ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರಕಾರದ ಪ್ರತಿಷ್ಠಿತ “ಶ್ರೀ ಮಹರ್ಷಿ ವಾಲ್ಮೀಕಿ” ಪ್ರಶಸ್ತಿಗೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ವಾಲ್ಮೀಕಿ ಪ್ರಶಸ್ತಿಯು 5ಲಕ್ಷ ರೂ.ನಗದು, ಚಿನ್ನದ ಫಲಕವನ್ನು ಒಳಗೊಂಡಿದ್ದು, ರಾಜ್ಯ ಸರ್ಕಾರ ನೀಡುವ ಎರಡನೇ ಪ್ರಶಸ್ತಿ ಇದಾಗಿದೆ.  ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿರುವ ವ್ಯಕ್ತಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಅ.24ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರವರಿಗೆ ಪ್ರದಾನ ಮಾಡಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: