
ಮೈಸೂರು
ಅಕ್ರಮವಾಗಿ ಗೂಬೆ ಮಾರಾಟಕ್ಕೆ ಯತ್ನಿಸಿದ ಇಬ್ಬರ ಬಂಧನ
ಮೈಸೂರು,ಅ.23:- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಗೂಬೆಯನ್ನಿಟ್ಟು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಗಳಿಬ್ಬರನ್ನು ಮೈಸೂರಿನ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮಾರಾಟಕ್ಕಾಗಿ ಇರಿಸಿಕೊಂಡಿದ್ದ ಗೂಬೆಯನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮೂಲತಃ ವಿರಾಜಪೇಟೆ ತಾಲೂಕು ಬಿಳಗುಂದ ಗ್ರಾಮದ ಬಿ.ಎ ರವೀಶ್ ರಾವ್, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಎಸ್ ಆರ್ ಶ್ರೀಧರ್ ಎಂದು ಗುರುತಿಸಲಾಗಿದೆ.
ಡಿಸಿಎಫ್ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಂಚಾರಿ ದಳದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (ಕೆ.ಎಸ್,ಎಸ್.ಎಚ್)