ಮೈಸೂರು

ಮಹರ್ಷಿ ವಾಲ್ಮೀಕಿ ಜಯಂತಿಯ ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿದ ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಅ.24:- ಸಾಂಸ್ಕೃತಿಕ ನಗರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್  ವತಿಯಿಂದ ವಾಲ್ಮೀಕಿ ಜಯಂತ್ಯೋತ್ಸವ ಆಚರಿಸಲಾಗುತ್ತಿದ್ದು, ನಗರದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ವಾಲ್ಮೀಕಿ ಅವರ ಭಾವಚಿತ್ರ, ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಮೇಳೈಸಿದವು.

ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಕಲಾಮಂದಿರದವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ  ನಂದಿಕಂಬಕ್ಕೆ ಪೂಜೆ ಸಲ್ಲಿಸಿ, ವಾಲ್ಮೀಕಿ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಅನೇಕ ಕಲಾವಿದರು ಬೇಡರ ಕಣ್ಣಪ್ಪ,ಕೆಳದಿ ಶಿವಪ್ಪ ನಾಯಕ,ಬಿಚ್ಚುಗತ್ತಿ ಭರಮಣ್ಣ ನಾಯಕ,ಸಿಂಧೂರ ಲಕ್ಷಣ,ಗಂಡುಗಲಿ ಕುಮಾರ ರಾಮ,ಏಕಲವ್ಯ,ಕಾರ್ಗಳ್ಳಿ ಮಾರನಾಯಕರ ಆಕರ್ಷಕ ವೇಷ ಭೂಷಣಗಳ ಧರಿಸಿ ಸಾರೋಟು ಏರಿದ್ದರು. ವೀರಗಾಸೆ,ಡೊಳ್ಳು ಕುಣಿತ,ಪೂಜಾ ಕುಣಿತ, ಹುಲಿಕುಣಿತ ಹಲವಾರು ಜಾನಪದ ಕಲಾ ತಂಡಗಳಿಂದ ಬೃಹತ್ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ವಾಸು, ಜಿಲ್ಲಾಧಿಕಾರಿ ಅಭಿರಾಮ್ ಜೀ ಶಂಕರ್, ಎಸ್.ಪಿ.ಅಮಿತ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: