ದೇಶ

ಪ್ರಧಾನಿ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ

ನವದೆಹಲಿ,ಅ.24-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ 2018ರ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಪ್ರಶಸ್ತಿಯನ್ನು ಪಡೆದವರಲ್ಲಿ ಮೋದಿ 14ನೇಯವರಾಗಿದ್ದಾರೆ ಎಂದು ಕೇಂದ್ರ ವಿದೇಶ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ವಿಶ್ವ ಶಾಂತಿ, ಮಾನವ ಅಭಿವೃದ್ಧಿ ಸುಧಾರಣೆ ಮತ್ತು ಭಾರತದಲ್ಲಿ ಪ್ರಜಾಸತ್ತೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವಲ್ಲಿ ಮೋದಿ ನೀಡಿದ ಕಾಣಿಕೆಯನ್ನೂ ಪರಗಣಿಸಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಸಹಕಾರ ಸುಧಾರಣೆ, ಜಾಗತಿಕ ಆರ್ಥಿಕತೆಯ ಬೆಳವಣಿಗೆ, ಭಾರತದಲ್ಲಿ ಮಾನವ ಅಭಿವೃದ್ಧಿ ಸುಧಾರಣೆ ಮತ್ತು ಭಾರತವನ್ನು ವಿಶ್ವದ ಅತ್ಯಂತ ವೇಗದಲ್ಲಿ ಬೆಳವಣಿಗೆ ಕಾಣುತ್ತಿರುವ ದೇಶವನ್ನಾಗಿ ಪರಿವರ್ತಿಸುವಲ್ಲಿ ಗೈದಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎಂದು ಸಿಯೋಲ್ ಶಾಂತಿ ಪುರಸ್ಕಾರ ಸಮಿತಿಯು ಹೇಳಿರುವುದಾಗಿ ಭಾರತ ಸರ್ಕಾರ ತಿಳಿಸಿದೆ.

ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿಗ್ರಹ ಉಪಕ್ರಮಗಳು ಮತ್ತು ನೋಟು ಅಮಾನ್ಯದಂತಹ ದಿಟ್ಟ ಕ್ರಮಗಳಿಂದ ಸರ್ಕಾರವನ್ನು ಪರಿಶುದ್ಧಗೊಳಿಸಲು ನಡೆಸಿರುವ ಯತ್ನಗಳನ್ನು ಪ್ರಶಸ್ತಿ ಸಮಿತಿಯು ಪ್ರಶಂಸಿಸಿದೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. (ಎಂ.ಎನ್)

Leave a Reply

comments

Related Articles

error: