
ಕರ್ನಾಟಕಪ್ರಮುಖ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ: ಸಚಿವರಿಂದ ಮೆರವಣಿಗೆಗೆ ಚಾಲನೆ
ಹಾಸನ (ಅ.24): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ರಾಮಾಯಣ ಗ್ರಂಥ ರಚಿತ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಅಂಗವಾಗಿ ವಿವಿಧ ಕಲಾ ತಂಡಗಳೊಂದಿಗೆ ಏರ್ಪಡಿಸಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿಂದು ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ.ರೇವಣ್ಣ ಅವರು ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಶಾಸಕರಾದ ಪ್ರೀತಂ ಜೆ.ಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ. ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್. ಪ್ರಕಾಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಹೆಚ್.ಸಿ.ಪುಟ್ಟಸ್ವಾಮಿ ಅವರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಸಮಾಜ ಸೇವಕರಾದ ಹೆಚ್.ಎಂ.ಶಿವಣ್ಣ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಭಾಗವಹಿಸಿದ್ದರು. ಮೆರವಣಿಗೆಯು ನಗರದ ಪ್ರಮುಖ ಬೀದಿ ಸಂಚರಿಸುತ್ತಾ ಹಾಸನಾಂಬ ಕಲಾಕ್ಷೇತ್ರ ತಲುಪಿತು. (ಎನ್.ಬಿ)