ಕರ್ನಾಟಕಪ್ರಮುಖ ಸುದ್ದಿ

ಉಪಚುನಾವಣೆ: ಮಂಡ್ಯ ಜಿಲ್ಲೆಯಲ್ಲಿ ನ.1ರ ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿ

ಮಂಡ್ಯ (ಅ.24): ಮಂಡ್ಯ ಲೋಕಸಭಾ ಉಪಚುನಾವಣೆಗೆ ಮತದಾನವು ನ.3 ನಡೆಯಲಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನ.1ರ ಸಂಜೆ 6 ಗಂಟೆಯಿಂದ ನ. 3ರ ಸಂಜೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯ ಎಲ್ಲಾ 7 ವಿಧಾನ ಸಭಾ ಚುನಾವಣಾ ಕ್ಷೇತ್ರಗಳ ಮತಗಟ್ಟೆಗಳ ವ್ಯಾಪ್ತಿಗೆ ಆದೇಶವು ಒಳಪಟ್ಟಿದ್ದು, ಎಲ್ಲಾ ಮತಗಟ್ಟೆಗಳ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ನಿಷೇಧಾಜ್ಞೆ ಇರುವ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ, ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ.

ಪಟಾಕಿ, ಸಿಡಿಮದ್ದು ಹಾಗೂ ಇತರೆ ಸ್ಫೋಟಕಗಳನ್ನು ಉಪಯೋಗಿಸುವಂತಿಲ್ಲ ಹಾಗೂ ಮನೆ ಮನೆಗೆ ತೆರಳಿ ನಡೆಸುವ ಪ್ರಚಾರದಲ್ಲಿ 10 ಜನರ ಸಂಖ್ಯೆಯನ್ನು ಮೀರಬಾರದು. ಮದುವೆ, ಶವ ಸಂಸ್ಕಾರ ಕಾರ್ಯಗಳಿಗೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣಾ ನೇಮಿಸಲ್ಪಟ್ಟಿರುವ ಅಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂಬ ಷರತ್ತುಗಳು ಆದೇಶದಲ್ಲಿ ಒಳಗೊಂಡಿದೆ ಎಂದು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: