ಮೈಸೂರು

ಅರಿವು ಮತ್ತು ಕೃಷಿ ಸಂವಾದ

ಮೈಸೂರು ಗ್ರಾಹಕರ ಪರಿಷತ್, ಕೃಷಿ ಜ್ಞಾನ ವಿಜ್ಞಾನ ವೇದಿಕೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆಯ ಆಶ್ರಯದಲ್ಲಿ ರೈತರಿಗೆ ಗ್ರಾಹಕರ ಹಕ್ಕುಗಳ ಕುರಿತು ಅರಿವು ಮತ್ತು ಕೃಷಿ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ಇನ್ಸ್’ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಅರಿವು ಮತ್ತು ಸಂವಾದ ಕಾರ್ಯಕ್ರಮವನ್ನು ಕೃಷಿ ವಿಜ್ಞಾನಿ ಡಾ. ವಸಂತಕುಮಾರ್ ತಿಮಕಾಪುರ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರೈತರಿಗೋಸ್ಕರ ಉಚಿತ ಪ್ರಯೋಗಾಲಯವನ್ನು ನಡೆಸಿಕೊಂಡು ಬರುತ್ತಿದ್ದು, ಹೆಚ್ಚು ಹೆಚ್ಚು ರೈತರನ್ನು ತಲುಪುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭ ರೈತರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: