ಸುದ್ದಿ ಸಂಕ್ಷಿಪ್ತ

ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಿ

ಮೈಸೂರು,.26-ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ನವೆಂಬರ್ 8 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಕೆ.ಆರ್.ನಗರ ತಾಲ್ಲೂಕಿನಲ್ಲಿ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಆಯುಧ ರಹದಾರಿ ಹೊಂದಿರುವವರು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಮತ್ತು ಯಾವುದೇ ವ್ಯಕ್ತಿ ಸ್ಪೋಟಕ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದಾಗಲೀ, ಕಾನೂನುಬಾಹಿರ ಚಟುವಟಿಕೆಗಳಿಗೆ ಅವುಗಳನ್ನು ಬಳಸದಂತೆ ನಿಷೇಧಿಸುವ ಅವಶ್ಯಕತೆ ಇರುವುದನ್ನು ಮನಗಂಡು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: