ಮೈಸೂರು

ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಕಾಂಗ್ರೆಸ್  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪಕ್ಷದ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿ.ಜಿ.ಶಿವಕುಮಾರ್ ಶುಕ್ರವಾರ ತಿಳಿಸಿದರು.

ಮೈಸೂರಿನ ಪತ್ರಕರ್ತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ದಲಿತ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಅನುಯಾಯಿಯಾಗಿದ್ದು, ಅವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದನ್ನು ಬೆಂಬಲಿಸಿ,  ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ನಗರ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲ ಶಿವಣ್ಣ, ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹಾಜರಿದ್ದರು.

Leave a Reply

comments

Related Articles

error: