ಸುದ್ದಿ ಸಂಕ್ಷಿಪ್ತ

ಅರಸು ಮಹಾಸಭಾದಿಂದ ಸನ್ಮಾನ ಕಾರ್ಯಕ್ರಮ

2016-17ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪತ್ರಿಕೋದ್ಯಮದಲ್ಲಿ 5 ಚಿನ್ನದ ಪದಕ ಮತ್ತು 2 ನಗದು ಬಹುಮಾನ ಪಡೆದಿರುವ ಶಿವೇಂದ್ರ ಜಿ. ಅರಸ್ ಅವರಿಗೆ ಕರ್ನಾಟಕ ರಾಜ್ಯ ಅರಸು ಮಹಾ ಸಭಾ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ 31ರ ಶನಿವಾರ, ಬೆಳಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಕಾರ್ಯಕ್ರಮ ನಡೆಯಲಿದೆ.

ಉಡುಪಿ ಮಠದ ಶ್ರೀ ವಿಶ್ವಾಧಿರಾಜ ತೀರ್ಥ ಸ್ವಾಮೀಜಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಅರಸು ಚಿಂತಕರ ಚಾವಡಿ ಅಧ್ಯಕ್ಷ ಕೆಂಪರಾಜೇ ಅರಸ್, ಕರ್ನಾಟಕ ರಾಜ್ಯ ಅರಸು ಮಹಾಸಭಾ ಅಧ್ಯಕ್ಷ ನಂದೀಶ್ ಜಿ. ಅರಸ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: