ಪ್ರಮುಖ ಸುದ್ದಿಮೈಸೂರು

ಅ.31ರಂದು ಕಾಂಗ್ರೆಸ್ ವತಿಯಿಂದ : ಜಿಲ್ಲಾ ಕಾರ್ಮಿಕ ಸಮ್ಮೇಳನ

ಮೈಸೂರು, ಅ. 29 : ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ಅ.31ರಂದು ಮಧ್ಯಾಹ್ನ 2 ಗಂಟೆಗೆ ಇಂದಿರಾಗಾಂಧಿ ದಿವಸ್ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮ ಜಯಂತಿ ಅಂಗವಾಗಿ ಜಿಲ್ಲಾ ಕಾರ್ಮಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಾವಿನಹಳ್ಳಿ ಸಿ.ರವಿ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಪ್ರೊ. ರಾಜೀವ್ ಗೌಡ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಸಂಸದರಾದ ಆರ್. ಧ್ರುವನಾರಾಯಣ್, ಶಾಸಕರಾದ ತನ್ವೀರ್ ಸೇಠ್, ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 11ಕ್ಕೆ ಗಾಂಧಿನಗರದ ಲಿಟಲ್ ಸಿಸ್ಟರ್ಸ್ ಆಫ್ ಪೂರ್ಸ್ ವೃದ್ದಾಶ್ರಮದಲ್ಲಿ ಹಣ್ಣು ವಿತರಣೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ನೋಂದಣಿ ಮಾಡಲಾಗುವುದು.

ಇದೇ ದಿನದಂದು ಬೆಳಗ್ಗೆ 10 ಗಂಟೆಗೆ ರಾಜ್ಯ ಕಾರ್ಮಿಕ ಸಮಿತಿ ವತಿಯಿಂದ ರಾಜ್ಯ ಕಾರ್ಯಕಾರಿಣಿ ಹಾಗೂ ನೂತನ ಕಾರ್ಯಕ್ರಮಗಳ ಅನುಷ್ಠಾನ ಕರಡು ಸಿದ್ಧತೆ ಮಾಡಲಾಗುವುದು. ಅಲ್ಲದೇ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಯ ಕಲ್ಪಿಸುವಂತೆ ಕಾರ್ಮಿಕ ಕಾರ್ಡ್ ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಮಿಕ ಸಮಿತಿಯ ವಿಜಯಲಕ್ಷ್ಮಿ, ಪ್ರಕಾಶ್ ಕುಮಾರ್, ಹಡತಲೆ ಮಂಜುನಾಥ್ ಇನ್ನಿತರರು ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: