ಸುದ್ದಿ ಸಂಕ್ಷಿಪ್ತ

ನ. 18 : ಸುತ್ತೂರು ಶ್ರೀಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ

ಮೈಸೂರು,ಅ.29;- ಶ್ರೀಕ್ಷೇತ್ರ ಸುತ್ತೂರಿನಲ್ಲಿ ಆದಿಜಗದ್ಗುರುಗಳ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುತ್ತಿರುವುದರ ಜೊತೆಗೆ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಕೃಪಾಶೀರ್ವಾದಗಳೊಂದಿಗೆ   2009ರ ಫೆಬ್ರವರಿಯಿಂದ ಪ್ರತಿ ತಿಂಗಳು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿರುವ ಶ್ರೀಮಠವು ಜನಸಾಮಾನ್ಯರ ಕಲ್ಯಾಣ ಕಾರ್ಯಕ್ಕೆ ಮುಂದಾಗಿದೆ. ಎಲ್ಲಾ ವರ್ಗದವರೂ ಈ ಕಲ್ಯಾಣ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಸುತ್ತೂರು ಶ್ರೀಕ್ಷೇತ್ರದಲ್ಲಿ ಏರ್ಪಡಿಸಲಿರುವ ಸಾಮೂಹಿಕ ವಿವಾಹದಲ್ಲಿ ಹರಗುರು ಚರಮೂರ್ತಿಗಳು, ವಧುವರರ ಬಂಧುಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸಿ ನೂತನ ದಂಪತಿಗಳಿಗೆ ಶುಭ ಹಾರೈಸಲಿದ್ದಾರೆ.

ಈ ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ಅರ್ಜಿ ನಮೂನೆಯಲ್ಲಿ ವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ ವಧುವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಪಡೆದ ದೃಢೀಕರಣ ಪತ್ರ ಲಗತ್ತಿಸಿರಬೇಕು. ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.  ನವೆಂಬರ್ 18, 2018 ಭಾನುವಾರ ತಿಂಗಳ ಸಾಮೂಹಿಕ ವಿವಾಹ ಕಾರ್ಯಕ್ರಮವಿದ್ದು, 8 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್‍ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ: 08221–232217, 232033, 9741342222 ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. (ಎಸ್.ಎಚ್)

Leave a Reply

comments

Related Articles

error: