ಮೈಸೂರು

ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ : ಜೆ.ಜಗದೀಶ್ ಸ್ಪಷ್ಟನೆ

1-webಮೈಸೂರಿನಲ್ಲಿ ಕುಡಿಯುವ ನೀರಿನ ಕುರಿತಂತೆ ಈಗಾಗಲೇ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಜೆ.ಜಗದೀಶ್ ಸ್ಪಷ್ಟಪಡಿಸಿದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಆಯುಕ್ತ ಜೆ.ಜಗದೀಶ್ ಮಾತನಾಡಿ ಕೆ.ಆರ್.ಎಸ್.ನಲ್ಲಿ 6ಟಿಎಂಸಿ ಅಡಿ, ಕಬಿನಿ ಜಲಾಶಯದಲ್ಲಿ 4ಟಿಎಂಸಿ ಅಡಿ ನೀರಿದೆ. ಮೈಸುರು, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ತಿಂಗಳಿಗೆ ಕನಿಷ್ಠ 1.3ಟಿಎಂಸಿ ಅಡಿ ನೀರು ಬೇಕಿದೆ. ಹೀಗಾಗಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ನೀರು ಸರಬರಾಜು ಮಾಡುವ ಟ್ಯಾಂಕರ್ ಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಇನ್ನು ಮುಂದೆ ಪ್ರತಿ ವಾಹನದಲ್ಲಿಯೂ ದೂರವಾಣಿ ಸಂಖ್ಯೆಯನ್ನು ನಮೂದಿಸಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಸಾರ್ವಜನಿಕರಿಗಿಂತ ಖಾಸಗಿ ವ್ಯಕ್ತಿಗಳೇ ನೀರು ತೆಗೆದುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಅಕ್ರಮ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇವುಗಳ ಕಡಿವಾಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಮಾಹಿತಿ ಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಸಭೆಯಲ್ಲಿ ಮೇಯರ್.ಎಂ.ಜೆ.ರವಿಕುಮಾರ್, ಉಪಮೇಯರ್ ರತ್ನ ಲಕ್ಷ್ಮಣ,ಮಾಜಿ ಮಹಾಪೌರ ಅಯೂಬ್ ಖಾನ್ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: