ಸುದ್ದಿ ಸಂಕ್ಷಿಪ್ತ

ಸಹಾಯಧನ: ಅರ್ಜಿ ಆಹ್ವಾನ

ಮೈಸೂರು,.31-ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನದ ಕೃಷಿ ಯಂತ್ರೀಕರಣ ಉಪ ಅಭಿಯಾನದಡಿ ತೋಟಗಾರಿಕೆ ಚಟುವಡಿಕೆಗಳಿಗಾಗಿ ಅನುಮೋದಿತ ಕಂಪನಿಗಳಿಂದ ಖರೀದಿಸಿದ ಯಂತ್ರೋಪಕರಣಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಹಾಗೂ ಫಲಾನುಭವಿಗಳಿಗೆ ಶೇ.50 ರಷ್ಟು ಹಾಗೂ ಇತರೆ ವರ್ಗದ ರೈತರಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು.

ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ.90 ರಷ್ಟು ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತ ಫಲಾನುಭವಿಗಳು ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು. (ಎಂ.ಎನ್)

Leave a Reply

comments

Related Articles

error: