ಮೈಸೂರು

ಜಿ.ಪಂ ಉಪಚುನಾವಣೆಯಲ್ಲಿ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪಗೆ ಮುಖಭಂಗ

ಮೈಸೂರು, 31:- ಹಾಲಿ ಟಿ. ನರಸೀಪುರ ಕ್ಷೇತ್ರದ ಶಾಸಕರ ಸ್ಥಾನದಿಂದ ತೆರವಾಗಿದ್ದ ಜಿಲ್ಲಾ ಪಂಚಾಯಿತಿಯ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪನವರಿಗೆ ಮುಖಭಂಗವಾಗಿದೆ.

ಟಿ ನರಸೀಪುರ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ  ಎಮ್ ಅಶ್ವಿನ್ ಕುಮಾರ್ ಅವರ ಗೆಲುವಿನಿಂದ ತೆರವಾಗಿದ್ದ ತಾಲೂಕಿನ ಸೋಮನಾಥಪುರ ಜಿಲ್ಲಾ ಪಂಚಾಯತ್ ಉಪಚುನಾವಣೆಯಲ್ಲಿ ಜೆಡಿಎಸ್ ನ ಅಭ್ಯರ್ಥಿ  ಎಸ್. ವಿ.ಜಯಪಾಲ್ ಭರ್ಜರಿ ಜಯಗಳಿಸಿದ್ದಾರೆ. ಇವರು ಕಾಂಗ್ರೆಸ್ ನ ಡಿ.ಪದ್ಮನಾಭ್ ವಿರುದ್ಧ ಜಯಗಳಿಸಿದ್ದಾರೆ. ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಹಾಗೂ ಅವರ ಪುತ್ರ ಸುನಿಲ್ ಬೋಸ್ ಗೆ ಪ್ರತಿಷ್ಠೆಯ ಕಣವಾಗಿದ್ದ ಈ ಜಿಲ್ಲಾ ಪಂಚಾಯತ್ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: