ಮೈಸೂರು

ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು,ಅ.31:- ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರವಿಯೋಗ ದೇವರುಕೊಟ್ಟ ಶಿಕ್ಷೆ ಎಂದಿರುವ ಮಾಜಿ ಸಚಿವ  ಜನಾರ್ದನ ರೆಡ್ಡಿ ಹೇಳಿಕೆ ಖಂಡಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ರೈಲ್ವೆ ನಿಲ್ದಾಣದ ಬಾಬು ಜಗಜೀವನ ರಾಮ್ ಪ್ರತಿಮೆ ಬಳಿ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಜನಾರ್ದನ ರೆಡ್ಡಿ ವಿರುದ್ಧ ಧಿಕ್ಕಾರ ಕೂಗಿ ಕಿಡಿ ಕಾರಿದರು. ಕೂಡಲೇ ಗಣಿ ಲೂಟಿ ಕೋರ ಜನಾರ್ದನ ರೆಡ್ಡಿ  ಸಿದ್ದರಾಮಯ್ಯನವರಲ್ಲಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹೆಚ್.ವಿಜಯಶಂಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ  ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: