ಸುದ್ದಿ ಸಂಕ್ಷಿಪ್ತ

ಗೀತ ಗಾಯನ ಸ್ಪರ್ಧೆ

ಮೈಸೂರು,ಅ.31-ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1 ರಂದು ಸಂಜೆ 5 ಗಂಟೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತ ಗಾಯನ ಸ್ಪರ್ಧೆಯನ್ನು ಅಯೋಜಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಸ್ವವಿವರ ಹಾಗೂ ಗೀತೆಯ ವಿವರದೊಂದಿಗೆ ಸ್ಥಳದಲ್ಲೇ ಹೆಸರು ನೊಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: