ಮೈಸೂರು

ಬುಡಕಟ್ಟು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಒತ್ತಾಯ : ಪ್ರತಿಭಟನೆ

ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಮಕ್ಕಳಿಗೆ 1ನೇ ತರಗತಿಯಿಂದ ಪಿಯುಸಿವರೆಗೆ ಗುಣಮಟ್ಟದ, ಉಚಿತ, ಕಡ್ಡಾಯ ಶಿಕ್ಷಣ ನೀಡುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಪೋಷಕರ ವೇದಿಕೆ, ಬುಡಕಟ್ಟು ಕೃಷಿಕರ ಸಂಘ, ಎಲ್ಲಾ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕರ್ನಾಟಕ ರಾಜ್ಯದ 116 ಆಶ್ರಮ ಶಾಲೆಗಳನ್ನು ಒಂದನೇ ತರಗತಿಯಿಂದ ಪಿಯುಸಿವರೆಗೆ ಉನ್ನತೀಕರಿಸಿ ನವೋದಯ ಮಾದರಿಯಲ್ಲಿ ಉಚಿತ ಕಡ್ಡಾಯ ಶಿಕ್ಷಣ ನೀಡುವ ಕುರಿತು ಐದು ವರ್ಷಗಳಿಂದ ಒತ್ತಾಯಿಸುತ್ತ ಬಂದಿದ್ದರೂ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಅರಣ್ಯ ಮೂಲ ಬುಡಕಟ್ಟು ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಿಸಿದ ನೀತಿ ಸಂಹಿತೆಯನ್ನು ರಚಿಸುವುದರ ಮೂಲಕ ಬುಡಕಟ್ಟು ಪರಂಪರೆ, ಸಂಸ್ಕೃತಿ, ಭಾಷೆ, ಕಲೆ, ಆರ್ಥಿಕತೆ ಹಾಗೂ ಆಧುನಿಕ ಪದ್ಧತಿಯ ಸಮ್ಮಿಳಿತದೊಂದಿಗಿನ ಶಿಕ್ಷಣ ಪದ್ಧತಿ ಜಾರಿ ಮಾಡಬೇಕು. ಶಿಕ್ಷಣದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ನಿರ್ವಹಿಸಬೇಕು. ಆಹಾರ ಮತ್ತು ವಸತಿ ವ್ಯವಸ್ಥೆಯನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ನೀಡಬೇಕು. ಶಿಕ್ಷಣದ ಗುಣಮಟ್ಟವನ್ನು ಖಾತ್ರಿಗೊಳಿಸಲು ಶಾಲಾಮಟ್ಟದಿಂದ ರಾಜ್ಯಮಟ್ಟದವರೆಗೆ ಸಮುದಾಯ ಶಿಕ್ಷಕರು, ಪೋಷಕರು, ಸಂಘಟನೆ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರಗತಿ ಪರ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: