
ಮೈಸೂರು
ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ
ಹೊಸ ವರ್ಷದ ಪ್ರಯುಕ್ತ ಜನವರಿ 1 ರಂದು ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು/ಪ್ರವಾಸಿಗರು ಆಗಮಿಸುವುದರಿಂದ ಚಾಮುಂಡಿಬೆಟ್ಟದಲ್ಲಿ ವಾಹನ ದಟ್ಟಣೆಯಿಂದ ಸಂಚಾರಕ್ಕೆ ತೊಂದರೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಎಲ್ಲ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಜ.1 ರಂದು ಭಕ್ತಾದಿಗಳು/ಪ್ರವಾಸಿಗರು ತಮ್ಮ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ ಬಳಿಯಲ್ಲಿ ನಿಲುಗಡೆ ಮಾಡಿ ಅಲ್ಲಿಂದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಲ್ಲಿ ಸಂಸ್ಥೆಯವರು ನಿಗದಿಪಡಿಸಿರುವ ವೋಲ್ವೋ ಅಥವಾ ಸಾಮಾನ್ಯ ಬಸ್ಸಿನಲ್ಲಿ ದೇವಸ್ಥಾನಕ್ಕೆ ಬರಬೇಕು. ಹೆಲಿಪ್ಯಾಡ್’ನಿಂದ ವೋಲ್ವೊ ಬಸ್ಸಿಗೆ ರೂ. 20 ಮತ್ತು ಸಾಮಾನ್ಯ ಬಸ್ಸಿಗೆ 15 ರೂ. ದರ ನಿಗದಿಪಡಿಸಲಾಗಿದ್ದು, ಬಸ್ಸಿನಲ್ಲಿಯೇ ಬಂದು ದೇವರ ದರ್ಶನ ಪಡೆಯುವಂತೆ ತಿಳಿಸಿದ್ದಾರೆ.