ಪ್ರಮುಖ ಸುದ್ದಿ

ವೀರವೇ ಯಿಂದ ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ರಾಜ್ಯ(ಮಡಿಕೇರಿ) ನ.2 :  – ವೀರನಾಡು ರಕ್ಷಣಾ ವೇದಿಕೆ ವತಿಯಿಂದ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಧ್ವಜಾರೋಹಣದ ನಂತರ ಮಾತನಾಡಿದ ವೇದಿಕೆಯ ಅಧ್ಯಕ್ಷ ಹರೀಶ್ ಆಚಾರ್ಯ, ಜಾತಿ, ಮತ, ಪಕ್ಷ ಭೇದ ಮರೆತು ಕನ್ನಡದ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದರು. ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕನ್ನಡದ ನೆಲ, ಜಲ, ಸಂಸ್ಕೃತಿ ಹಾಗೂ ಭಾಷೆಗಳ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಮತ್ತು ಹೋರಾಟ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಕನ್ನಡ ಶಾಲೆಗಳನ್ನು ಕಡೆಗಣಿಸದೆ ಪರಿಗಣಿಸುವಂತ್ತಾಗಬೇಕೆಂದು ಹರೀಶ್ ಆಚಾರ್ಯ ಕರೆ ನೀಡಿದರು. ಪ್ರಮುಖರಾದ ಕೋಳಿಬೈಲ್ ಜಯರಾಮ್ ಮುಸ್ತಫ, ಟೆಂಪೋ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಈ ಸಂದರ್ಭ ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: