ಮೈಸೂರು

ನ.6 : ಗಾಂಧೀಜಿ ಕುರಿತ ಸಿಮೆಂಟ್ ಶಿಲ್ಪಗಳ ಲೋಕಾರ್ಪಣೆ ಸಮಾರಂಭ ; ಪ್ರೊ.ಆರ್.ರಾಜಣ್ಣ

ಮೈಸೂರು,ನ.3:- ನ.6 ರಂದು ಗಾಂಧೀಜಿ ಕುರಿತ ಸಿಮೆಂಟ್ ಶಿಲ್ಪಗಳ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಆರ್.ರಾಜಣ್ಣ ತಿಳಿಸಿದರು.

ಇಂದು ಮಾನಸ‌ ಗಂಗೋತ್ರಿಯ ಗಾಂಧಿ ಅಧ್ಯಯನ ಸಂಸ್ಥೆಯ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಕನ್ನಡ ಮತ್ತು ಸಂಸ್ಕೃತ ಇಲಾಖೆ ,  ಕರ್ನಾಟಕ ಶಿಲ್ಪಕಲಾ ಅಕಾಡೆಮಿ  ಬೆಂಗಳೂರು, ರಂಗಾಯಣ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಕಾರದಲ್ಲಿ ಈ ಸಮಾರಂಭ ನಡೆಯುತ್ತಿದೆ. ಗಾಂಧೀಜಿಯವರ ವಿವಿಧ ಭಂಗಿಗಳ 26 ಶಿಲ್ಪಗಳು ಸಿದ್ಧಗೊಂಡಿವೆ. ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ತಯಾರಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ಉದ್ಘಾಟನೆ ಮಾಡಲಿದ್ದಾರೆ. ಸಮಾರಂಭದಲ್ಲಿ ವಿವಿಧ ಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: