ಕರ್ನಾಟಕ

ಮದ್ದೂರಿನಲ್ಲಿ ಕೈ ಕೊಟ್ಟ ಮತಯಂತ್ರ

ಬೆಂಗಳೂರು (ಅ.3): ಇಂದು ನಡೆಯುತ್ತಿರುವ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಕೆ.ಕೋಡಿಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 20ರಲ್ಲಿ ಮತಯಂತ್ರ ಕೈಕೊಟ್ಟ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತಗೊಂಡಿತ್ತು.

ನಂತರ ಮತಗಟ್ಟೆ ಅಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಎನ್.ಸಿದ್ದೇಶ್ವರ ಅವರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಸೆಕ್ಟರ್ ಅಧಿಕಾರಿಯಾದ ಶ್ರೀಕಂಠ ಪ್ರಭು ಮತಯಂತ್ರಗಳನ್ನು ಬದಲಾವಣೆ ಮಾಡಿ ಶಾಂತಿಯುತವಾಗಿ ಮತದಾನ ನಡೆಯಲು ಶ್ರಮಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: