ಮೈಸೂರು

ವೇತನ ಶ್ರೇಣಿಯಲ್ಲಿನ ತಾರತಮ್ಯ ಸರಿಪಡಿಸಿ : ಪ್ರತಿಭಟನೆ

ಪದವಿಪೂರ್ವ ಕಾಲೇಜುಗಳ  ಉಪನ್ಯಾಸಕರ ವೇತನ ಶ್ರೇಣಿಯಲ್ಲಿನ ತಾರತಮ್ಯ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿಪೂರ್ವ  ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮೈಸೂರು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, 2013ರ ಬ್ಯಾಚ್’ನಲ್ಲಿ ನೇಮಕಗೊಂಡ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಿ.ಇಡಿ ಮಾಡಲು ವೇತನ ಸಹಿತ ರಜೆ ಸೌಲಭ್ಯ ನೀಡಿ ಅವರಲ್ಲಿರುವ ಆತಂಕ ದೂರ ಮಾಡಬೇಕೆಂದು ತಿಳಿಸಿದರು. ಎಂ.ಫಿಲ್ ಮತ್ತು ಪಿಎಚ್.ಡಿ ಪದವಿ ಪಡೆದ ಉಪನ್ಯಾಸಕರಿಗೆ ವಿಶೇಷ ಬಡ್ತಿ ನೀಡುವುದು ಹಾಗೂ ಪದವಿ ಕಾಲೇಜುಗಳಿಗೆ ಬಡ್ತಿ ನೀಡಲು ಅನುವಾಗುವ ಹಾಗೆ ವೃಂದ ಹಾಗೂ ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಬೇಕು. ಅರೆಕಾಲಿಕ  ಉಪನ್ಯಾಸಕರಾಗಿ ಸಲ್ಲಿಸಿದ ಹಿಂದಿನ ಸೇವೆಯನ್ನು ನಿವೃತ್ತಿ ಹಾಗೂ ಪಿಂಚಣಿಗೆ ಪರಿಗಣಿಸಿ, ಗುತ್ತಿಗೆ ಆಧಾರದ ಉಪನ್ಯಾಸಕರ ಕಾಲ್ಪನಿಕ ವೇತನ ಬಡ್ತಿ ಹಿಂದಕ್ಕೆ ಪಡೆಯುವ ಆದೇಶವನ್ನು ರದ್ದುಪಡಿಸಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಗೌರವ ಅಧ್ಯಕ್ಷ ಎನ್.ಜಯರಾಂ, ಜಿಲ್ಲಾಧ್ಯಕ್ಷ ಸುರೇಶ್ ಬಾಬು ಹೆಚ್.ಜಿ. ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: