ಮೈಸೂರು

ಕಾಲೇಜು ವಿದ್ಯಾರ್ಥಿಗಳಿಂದ ನಾಟಕ ಹಾಗೂ ಜಾನಪದ ನೃತ್ಯ ಸ್ಪರ್ಧೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣದ ಸಂಯುಕ್ತಾಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ನಾಟಕ ಹಾಗೂ ಜಾನಪದ ನೃತ್ಯ ಸ್ಪರ್ಧೆಯನ್ನು ಜ.2 ಮತ್ತು 3ರಂದು ರಂಗಾಯಣದ ಕಲಾಮಂದಿರ ಆವರಣದಲ್ಲಿ ಆಯೋಜಿಸಲಾಗಿದೆ.

ಜ.2ರಂದು ಬೆಳಿಗ್ಗೆ 10:30ಕ್ಕೆ ಕಲಾವಿದ ಡಾ.ತುಳಸೀರಾಮಚಂದ್ರ ಸ್ಪರ್ಧೆಗೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಿ.ಎಂ. ರಾಮಚಂದ್ರ ಹಾಗೂ ಜಾನಪದ ಅಕಾಡೆಮಿ ಸದಸ್ಯ ಕಂಸಾಳೆ ಕುಮಾರಸ್ವಾಮಿ ಭಾಗವಹಿಸುವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣ ನಿರ್ದೇಶಕ ಕೆ.ಎ. ದಯಾನಂದ್ ಅಧ್ಯಕ್ಷತೆ ವಹಿಸುವರು.

ವಿದ್ಯಾರ್ಥಿಗಳಿಗೆ ರಂಗಭೂಮಿ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಳೆದೊಂದು ತಿಂಗಳಿನಿಂದ ರಾಜ್ಯದ ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡುಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಂಡ್ಯ ಜಿಲ್ಲೆಗಳ ಆಯ್ದ ಕಾಲೇಜುಗಳಲ್ಲಿ ನಾಟಕ ಹಾಗೂ ಜಾನಪದ ನೃತ್ಯ ಸ್ಪರ್ಧೆ ಹಾಗೂ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿ ಸ್ಪರ್ಧೆಗಾಗಿ 8 ತಂಡಗಳನ್ನು ಆಯ್ಕೆ ಮಾಡಲಾಗಿದ್ದು ಅಂತಿಮ ಸುತ್ತಿನಲ್ಲಿ ಆಯ್ಕೆಯಾದ ತಂಡಗಳಿಂದ ಎರಡು ದಿನಗಳಿಂದ ಸ್ಪರ್ಧೆಗಳು ಜರುಗುವವು ಎಂದು ಸಂಯೋಜಕ ಎಂ.ನಂಜಯ್ಯ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 0821-2512639, 2415905 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: