ಮೈಸೂರು

ನೂತನ ವರ್ಷಾಚರಣೆ : ಸ್ವಚ್ಛತಾ ಕಾರ್ಯಕ್ರಮ

ಮೈಸೂರಿನ ಕೆ.ಜಿ.ಕೊಪ್ಪಲು ಬಳಿ ಇರುವ ಕನ್ನೇಗೌಡರ ವೃತ್ತದ ಕೆಳಸೇತುವೆ ಹತ್ತಿರ ಸ್ಪಂದನ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸುವುದರ ಮೂಲಕ ನೂತನ ವರ್ಷಾಚರಣೆಯನ್ನು ಆಚರಿಸಲಾಯಿತು.

ಹೊಸ ವರ್ಭಾಷಾಚರಣೆ ಪ್ರಯುಕ್ತ ಸ್ಪಂದನ ಟ್ರಸ್ಟ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅನೇಕರು ಭಾನುವಾರ ಮುಂಜಾನೆ ಕನ್ನೇಗೌಡ ವೃತ್ತದ ಬಳಿ ಇರುವ ಕಸಕಡ್ಡಿಗಳು, ದೇವರ ಹಳೆಯ ಭಾವಚಿತ್ರಗಳನ್ನೆಲ್ಲ ತೆಗೆದು ಸ್ವಚ್ಛಗೊಳಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಮುಡ ಅಧ್ಯಕ್ಷ ನಾಗೇಂದ್ರ ಮಾತನಾಡಿ ಮೈಸೂರು 2 ಬಾರಿ ಸ್ವಚ್ಛ ನಗರಿ ಪ್ರಶಸ್ತಿಗೆ ಭಾಜನವಾಗಿದೆ. ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸ್ವಚ್ಛ ನಗರ ಎಂಬ ಹೆಗ್ಗಳಿಕೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಎಲ್ಲರೂ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭ ರಾಜ್ಯ ನೇಕಾರರ ಹಿತರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಸ್. ದಿವಾಕರ, ರವಿಗೌಡ ಮತ್ತಿತರರು ಉಪಸ್ಥಿತರಿದ್ದರು.

ಸುತ್ತಮುತ್ತಲ ಯುವಕರು ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಕಂಡುಬಂತು.

Leave a Reply

comments

Related Articles

error: