ಮೈಸೂರು

2018ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಸಂಸದ ಸಿಂಹ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಮೂವರ ನಾಯಕತ್ವದಲ್ಲಿ ಬಿಜೆಪಿ 2018ರ ಚುನಾವಣೆಯನ್ನು ಎದುರಿಸಲಿದೆ. ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮೈಸೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾ ಸಭೆ ಸಡೆಯುತ್ತಿದ್ದು, ಉತ್ತಮ ಬೆಂಬಲ ಸಿಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಹೆಜ್ಜೆಯಿಡಲು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದರು.

ಎಲ್ಲ ರಂಗಗಳಿಂದಲೂ ವಿಫಲಗೊಂಡಿರುವ ಸರ್ಕಾರದಿಂದ ಜನತೆ ಬೇಸತ್ತಿದ್ದು, ಬದಲಾವಣೆ ಬಯಸಿದ್ದಾರೆ. ಬಿಜೆಪಿ ಹಿಂದೆ ಮಾಡಿದ ತಪ್ಪನ್ನು ಮರಳಿ ಮಾಡಬಾರದು. ಅದಕ್ಕಾಗಿ ಯುವಕರು ತಮಗೆ ನೀಡಿರುವ ಜವಾಬ್ದಾರಿಯನ್ನು ಅಧಿಕಾರ ಎಂದು ತಿಳಿಯದೇ ಕರ್ತವ್ಯ ಎಂದು ನಿರ್ವಹಿಸಲು ಕರೆ ನೀಡಿದರು.

ಸಭೆಯಲ್ಲಿ ಮಹದೇವಸ್ವಾಮಿ, ಸಂಪತ್, ಮಂಜುನಾಥ್, ಮಾರ್ಬಳ್ಳಿ ಮಹಾದೇವ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: