ಮೈಸೂರು

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮೈಸೂರು, ನ.7:- ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಾಂತರ ಪೋಲಿಸರು ಬಂಧಿಸಿ ಜೈಲಿಗಟ್ಟಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಳಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಧಿತನನ್ನು ಗ್ರಾಮದ ಮಾದೇಗೌಡರ ಮಗ ಶೇಖರ್ ಎಂದು ಗುರುತಿಸಲಾಗಿದ್ದು, ಈತ ಹಲವಾರು ದಿನಗಳಿಂದ ಈ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲಿಸರು ಆರೋಪಿಯಿಂದ ಸುಮಾರು 310 ಗ್ರಾಂ ಗಾಂಜಾ ಹಾಗೂ ಒಂದು ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಎಸ್.ಐ ಶಿವಪ್ರಕಾಶ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪೋಲಿಸ್ ಸಿಬ್ಬಂದಿಗಳಾದ ಮುಖ್ಯ ಪೇದೆ ರಮೇಶ್, ಪೇದೆಗಳಾದ ದಿನೇಶ್, ರಾಜರತ್ನಂ, ಬೀರೆಗೌಡ, ಮನೋಹರ್ ಹಾಗೂ ಚಾಲಕ ಮಂಜು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: