ಕರ್ನಾಟಕ

ಹಾಸನದಲ್ಲಿ ಟಿಪ್ಪು ಸುಲ್ತಾನ್ ಜಯಂತಿಗಾಗಿ ಸಕಲ ಸಿದ್ಧತೆ

ಹಾಸನ (ನ.9): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10 ರಂದು ಬೆಳಗ್ಗೆ 10.30 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್.ಡಿ.ರೇವಣ್ಣ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕರಾದ ಪ್ರೀತಂ ಜೆ. ಗೌಡ ಅವರು ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ಶಾಸಕರಾದ ಎ.ಟಿ.ರಾಮಸ್ವಾಮಿ, ಹೆಚ್.ಕೆ.ಕುಮಾರಸ್ವಾಮಿ, ಕೆ.ಎಂಶಿವಲಿಂಗೇಗೌಡ, ಕೆ.ಎಸ್.ಲಿಂಗೇಶ್, ಸಿ.ಎನ್.ಬಾಲಕೃಷ್ಣ, ಮರಿತಿಬ್ಬೇಗೌಡ, ಎಂ.ಎ.ಗೋಪಾಲಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ.ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್. ಪ್ರಕಾಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಪಿ. ಪುಟ್ಟಸ್ವಾಮಿ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಎ.ವಿ.ಕೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಹೆಚ್.ಎಲ್. ಮಲ್ಲೇಶ್‍ಗೌಡ ಅವರು ಉಪನ್ಯಾಸ ನೀಡಲಿದ್ದಾರೆ. (ಎನ್.ಬಿ)

Leave a Reply

comments

Related Articles

error: