ಮೈಸೂರು

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರಿನ ಆದರ್ಶ ಸೇವಾ ಸಂಘವು ಪ್ರಸಕ್ತ ಸಾಲಿನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ನಗರಪ್ರದೇಶದಲ್ಲಿ ಓದಿದ ವಿದ್ಯಾರ್ಥಿಗಳು 90%ಕ್ಕಿಂತ ಹೆಚ್ಚು ಅಂಕ ಹಾಗೂ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ಓದಿರುವ ಶೇಕಡಾ 85ರಷ್ಟು ಅಂಕಗಳಿಸಿರುವ ವಿದ್ಯಾರ್ಥಿಗಳು ಹಾಗೂ ಡಿಪ್ಲೊಮಾ, ಪದವಿ, ಸ್ನಾತಕೋತ್ತರಪದವಿಗಳ ಅಂತಿಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕವನ್ನು ಗಳಿಸಿರುವ ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ನಿರ್ಧರಿಸಿದೆ.

ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಿರುವ ಪ್ರತಿಭಾವಂತರನ್ನೂ ಸಮ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ರಾ. ರಾಮಕೃಷ್ಣ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಚೇರಿ ದೂ.ಸಂ. 0821-2344974, ಮೊ.ಸಂ. 9481067333ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: