ಕರ್ನಾಟಕಪ್ರಮುಖ ಸುದ್ದಿ

ಚೇತನಾ ಯೋಜನೆಯಡಿ ಆರ್ಥಿಕ ಸಹಾಯ: ಅರ್ಜಿ ಆಹ್ವಾನ

ಮಂಡ್ಯ (ನ.9): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2018-19ನೇ ಸಾಲಿನಲ್ಲಿ “ಚೇತನಾ ಯೋಜನೆಯಡಿ” ಲೈಂಗಿಕ ಕಾರ್ಯಕರ್ತೆಯರು, ಲೈಂಗಿಕ ಶೋಷಣೆಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಮತ್ತು ಆರ್ಥಿಕ ಸ್ವಾವಲಂಬಿಗಳಾಗಿ ಜೀವನ ನಡೆಸಲು ಮತ್ತು ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಪ್ರಾರಂಭಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನೇರವಾಗಿ ರೂ.50,000/-, ರೂ.25,000/-ಗಳ ಸಾಲ ಹಾಗೂ ರೂ. 25,000/-ಗಳ ಸಹಾಯಧನ ಗಳ ಆರ್ಥಿಕ ಸೌಲಭ್ಯ ನೀಡಲಾಗುವುದು.

ಸೌಲಭ್ಯ ಪಡೆಯಲು ಅರ್ಹ ಮತ್ತು ಆಸಕ್ತಿಯುಳ್ಳ ಲೈಂಗಿಕ ಕಾರ್ಯಕರ್ತೆ, ಲೈಂಗಿಕ ಶೋಷಣೆಗೊಳಗಾದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಜಿಲ್ಲೆಯಲ್ಲಿ ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಹಾಗೂ ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲಾಗಿರುವ ಸ್ವಯಂ ಸೇವಾ ಸಂಸ್ಥೆಯಿಂದ ಅಧಿಕೃತ ಧೃಡೀಕರಣ ಪತ್ರವನ್ನು ಸಲ್ಲಿಸಬೇಕು.

ಸಾಲ ಸೌಲಭ್ಯಕ್ಕಾಗಿ ನೀಡುವ ಅರ್ಜಿಯಲ್ಲಿ ಅಧೀಕೃತ ನಿವಾಸದ ವಿಳಾಸ, ಮತದಾರರ ಗುರುತಿನ ಚೀಟಿ/ ಆಧಾರ್‍ಕಾರ್ಡ್ / ಪಡಿತರ ಚೀಟಿ ಯಾವುದಾದರೊಂದು ದಾಖಲಾತಿಯ ಪ್ರತಿಯನ್ನು ಸಲ್ಲಿಸುವುದು. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಲಿಂಕೇಜ್ ಆಗಿರುವ ಬ್ಯಾಂಕ್ ಖಾತೆ ಪುಸ್ತಕವನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಆದಾಯೋತ್ಪನ್ನ ಚಟುವಟಿಕೆಯನ್ನು ಆಯ್ಕೆ ಮಾಡಿಕೊಂಡು ಯೋಜನಾ ವರದಿ ಸಲ್ಲಿಸುವುದು.

ಅರ್ಹ ಮತ್ತು ಆಸಕ್ತಿಯುಳ್ಳ ಲೈಂಗಿಕ ಕಾರ್ಯಕರ್ತೆಯರು ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 23 ರೊಳಗೆ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ ಇಲ್ಲಿಗೆ ಸಲ್ಲಿಸಬೇಕು. (ಎನ್.ಬಿ)

Leave a Reply

comments

Related Articles

error: