ಮೈಸೂರು

ಕಾಂಗ್ರೆಸ್ ನವರಿಗೆ ಪ್ರಚಾರ ಮಾಡಲು ಬರುತ್ತಿಲ್ಲ : ದಿನೇಶ್ ಗುಂಡೂರಾವ್

ಕಾಂಗ್ರೆಸ್ ನವರಿಗೆ ಸರಿಯಾಗಿ ಪ್ರಚಾರ ಮಾಡಲು ಬರುತ್ತಿಲ್ಲ. ಇದರಿಂದಾಗಿಯೇ ಹಿನ್ನಡೆ ಅನುಭವಿಸುವಂತಾಗಿದೆ ಎನ್ನುವ ವಿಷಯವನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದರು.

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರಿಯಾದ ಪ್ರಚಾರ ನಮ್ಮಿಂದ ನಡೆಸಲು ಸಾಧ್ಯವಾಗುತ್ತಿಲ್ಲ ಅನಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರದ ಕಡೆ ಗಮನ ನೀಡಬೇಕು. “ಕಾಂಗ್ರೆಸ್ ನಡಿಗೆ ಸ್ವರಾಜ್ಯದ ಕಡೆಗೆ” ಎಂಬ ಧ್ಯೇಯವಿರಿಸಿ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ. ಬ್ಲಾಕ್ ಕಾಂಗ್ರೆಸ್ ಸದಸ್ಯರನ್ನೂ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕರ್ತರ ಸಮಾವೇಶವನ್ನು ರಾಜ್ಯದ ಎಲ್ಲ ಕಡೆ ನಡೆಸಲಾಗುತ್ತಿದೆ ಎಂದರು.

ಸಮಾವೇಶದಲ್ಲಿ ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಟಿ.ಎಸ್. ರವಿಶಂಕರ್, ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: