ಕರ್ನಾಟಕ

ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ: ಮೂವರ ಸಾವು; 7 ಮಂದಿ ಗಂಭೀರ

ಹೊನ್ನಾವರ,.13-ಚಾಲಕನ ನಿಯಂತ್ರಣ ತಪ್ಪಿದ ಕಾರು ಗುಡ್ಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆರೊಳ್ಳಿ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಆನಂದಪುರ ಮೂಲದ ಫಾತಿಮಾ (65), ರುಕಿಯಾ (45) ಹಾಗೂ ಚಾಬುಸಾಬ್ ಮೃತ ಪಟ್ಟವರು. ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸಾಗುತ್ತಿದ್ದಾಗ ವೇಳೆ ಅಪಘಾತ ನಡೆದಿದೆ.

ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: