ಮೈಸೂರು

ಐಜಿಪಿಯಾಗಿ ವಿಫುಲ್ ಕುಮಾರ್ ಅಧಿಕಾರ ಸ್ವೀಕಾರ

ಮೈಸೂರು ದಕ್ಷಿಣ ವಲಯ ಐಜಿಪಿಯಾಗಿ ವಿಫುಲ್ ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು.

ಮೈಸೂರಿನ ಐಜಿಪಿ ಕಚೇರಿಯಲ್ಲಿ ಸೋಮವಾರ ನಿರ್ಗಮನ ಐಜಿಪಿ ಬಿ.ಕೆ.ಸಿಂಗ್ ಹೂಗುಚ್ಛ ನೀಡುವ ಮೂಲಕ ಐಜಿಪಿ ವಿಫುಲ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಹೂಗುಚ್ಛ ಸ್ವೀಕರಿಸಿ ಮಾತನಾಡಿದ ಅವರು, ಇಲ್ಲಿನ ಐದು ಜಿಲ್ಲೆಗಳ ವ್ಯಾಪ್ತಿಗೆ ಬರುವ ದಕ್ಷಿಣ ವಲಯದ ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಆಗು-ಹೋಗುಗಳನ್ನು ಸಂಪೂರ್ಣವಾಗಿ ತಿಳಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇನೆ. ಯಾವ ಯಾವ ರೀತಿ ಕೆಲಸಗಳು ನಡೆಯಬೇಕೆನ್ನುವುದನ್ನು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಉಪಸ್ಥಿತರಿದ್ದರು.

ವಿಫುಲ್ ಕುಮಾರ್ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ದಕ್ಷಿಣ ವಲಯ ಐಜಿಪಿಯಾಗಿ ಬಿ.ಕೆ.ಸಿಂಗ್ ಕಾರ್ಯನಿರ್ವಹಿಸಿದ್ದರು.

Leave a Reply

comments

Related Articles

error: