ಕರ್ನಾಟಕಮೈಸೂರು

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಚಿವ ತನ್ವೀರ್ ಸೇಠ್

2017ನೇ ಸಾಲಿನ ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಈಗಾಗಲೇ ಪೂರ್ವ ತಯಾರಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಅವರು, ಆದರ್ಶ ಆಂಗ್ಲ ಮಾಧ್ಯಮ ಶಾಲೆ ಮತ್ತು ವಸತಿ ನಿಲಯ ಕಟ್ಟಡ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಆದಷ್ಟು ಬೇಗ ಕೊರತೆಯಿರುವ ಶಿಕ್ಷಕರ ಹುದ್ದೆಗಳನ್ನು ತುಂಬಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ 1689 ಶಿಕ್ಷಕರನ್ನು ನೇಮಕಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿ ಮಕ್ಕಳ ಶಿಕ್ಷಣ ಗುಣಮಟ್ಟ ಪ್ರಗತಿ ಹಿನ್ನೆಲೆಯಲ್ಲಿ ಸರ್ಕಾರದ ವಸತಿ ಶಾಲೆಯಾದ ಆದರ್ಶ ಆಂಗ್ಲ ಮಾಧ್ಯಮದಲ್ಲಿ ಶಾಲೆಗಳಲ್ಲಿ ಪ್ರಸ್ತುತ 6 ರಿಂದ 10 ನೇ ತರಗತಿಯವರೆಗೂ ಮಾತ್ರವಿದ್ದು ಮುಂದಿನ ವರ್ಷಗಳಲ್ಲಿ ಪಿಯುಸಿಯವರೆಗೂ ವಿಸ್ತರಿಸುವ ಆಶ್ವಾಸನೆ ನೀಡಿದರು.

 

Leave a Reply

comments

Related Articles

error: