ಮೈಸೂರು

ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಪ್ರತಿಭಟನೆ ನಾಳೆ

ಮೈಸೂರು,ನ.13 : ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ, ನ್ಯಾಷನಲ್ ಅಕಾಡೆಮಿಕ್ ಜ್ಯಾಂಟ್ ಫ್ರೆಂಟ್ ಪೋಷಕರು ಮತ್ತು ಶಿಕ್ಷಕರನ್ನೊಳಗೊಂಡ ಸಂಘಟನೆ ವತಿಯಿಂದ ನಾಳೆ ಬೆಳಗ್ಗೆ 11 ಗಂಟೆಗೆ ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಬಾಲಕಾರ್ಮಿಕ ಪದ್ಧತಿ ವಿರೋಧಿಸಿ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ವಿರೋಧಿಸಿ, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರಲು ಹಾಗೂ ಪೌಷ್ಠಿಕ ಆಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುವುದು ಎಂದು ವೇದಿಕೆಯು ಪತ್ರಿಕಾ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: