ಮೈಸೂರು

ಮಕ್ಕಳ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ನ.14-ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರು ಮಕ್ಕಳ ಸಹಾಯವಾಣಿ ವತಿಯಿಂದ ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ 1098, ಬಾಲ್ಯವಿವಾಹ, ಬಾಲಕಾರ್ಮಿಕರು ಇತರ ವಿಷಯಗಳ ಕುರಿತು ಸಾರ್ವಜನಿಕರಲ್ಲ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಒಂದು ವಾರದವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.

ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಸರ್ಕಾರಿ ಶಾಲೆಯ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಕಮಲ, ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಕುಮಾರಸ್ವಾಮಿ, ಆರ್.ಎಲ್.ಎಚ್.ಪಿ ಸಂಸ್ಥೆಯ ನಿರ್ದೇಶಕರಾದ ಸರಸ್ವತಿ, ನಿಸರ್ಗ ಫೌಂಡೇಷನ್ ನ ನಿರ್ದೇಶಕರಾದ ನಂಜುಂಡಯ್ಯ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

 

Leave a Reply

comments

Related Articles

error: