ಮೈಸೂರು

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಭೆ

ಮೈಸೂರು,ನ.14-ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ 2019 ರ ಜನವರಿ 1 ರ ಜಿಲ್ಲಾಡಳಿತದಿಂದ ಕೈಗೊಂಡಿರುವ ಸಿದ್ದತೆಗಳ ಕುರಿತು ಮತದಾರರ ಪಟ್ಟಿಯ ವೀಕ್ಷಕರು ಆದ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕರಾದ ಕಪಿಲ್ ಮೋಹನ್ ಇಂದು ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಅ.10 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸ್ವೀಕರಿಸುವುದು, ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಇತ್ಯರ್ಥಪಡಿಸುವುದು, ಡೆಟಾಬೇಸ್ ಅನ್ನು ಅಪ್‍ಡೇಟ್‍ಗೊಳಿಸುವುದು ಹಾಗೂ ಪೂರಕ ಪಟ್ಟಿಗಳ ಮುದ್ರಣ ಹಾಗೂ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಚುರಪಡಿಸುವ ಕಾರ್ಯ, ಮತದಾರರ ಪಟ್ಟಿಯ ಶುದ್ಧೀಕರಣ ಇತ್ಯಾದಿಗಳ ಬಗ್ಗೆ ಮಹಾನಿರ್ದೇಶಕರು ಚರ್ಚಿಸಿ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಹುಣಸೂರು ಉಪವಿಭಾಗಾಧಿಕಾರಿ ನಿತೀಶ್ ಕುಮಾರ್, ಮೈಸೂರು ಉಪವಿಭಾಗಾಧಿಕಾರಿ ಶಿವೇಗೌಡ, ಮೈಸೂರು ಮಹಾನಗರಪಾಲಿಕೆ ಆಯುಕ್ತ ಜಗದೀಶ್, ಮೈಸೂರು ತಾಲ್ಲೂಕು ತಹಶೀಲ್ದಾರರಾದ ರಮೇಶ್ ಬಾಬು ಇತರರು ಉಪಸ್ಥಿತರಿದ್ದರು. (ಎಂ.ಎನ್)

 

Leave a Reply

comments

Related Articles

error: