ಕರ್ನಾಟಕಪ್ರಮುಖ ಸುದ್ದಿ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು

ಹಾಸನ (ನ.15): ರಾಪ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನ.14 ರಿಂದ 20 ರ ವರೆಗೆ ಆಚರಿಸಲಾಗುತ್ತಿದ್ದು. ಇದರ ಅಂಗವಾಗಿ ಹಾಸನ ನಗರ ಕೇಂದ್ರ ಗ್ರಂಥಾಲಯ ವತಿಯಿಂದ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸದರಿ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ. ನ.14 ರಿಂದ ನ. 20 ರವರೆಗೆ ಶಿಫಾರಸ್ಸು ರಹಿತ ಗ್ರಂಥಾಲಯ ಸದಸ್ಯತ್ವ ನೋಂದಣಿ ಆಂದೋಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಓದುಗರು ಇದರ ಸದುಪಯೋಗ ಪಡಿಸಿಕೊಂಡು ಗ್ರಂಥಾಯಗಳಲ್ಲಿ ಸದಸ್ಯತ್ವ ನೊಂದಾಯಿಸಿಕೊಳ್ಳಲು ತಿಳಿಸಿದೆ.

ವಿವಿಧ ಸ್ಪರ್ಧೆಗಳ ವಿವರ: ನ. 16 ರಂದು ಬೆಳಗ್ಗೆ 11 ರಿಂದ 1 ಗಂಟೆವರೆಗೆ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಥಳದಲ್ಲೆ ಚಿತ್ರ ಬಿಡಿಸುವ ಸ್ಪರ್ಧೆ ವಿಷಯ:- “ನಮ್ಮೂರ ಪರಿಸರ” ಅಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ 5 ರಿಂದ 7 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ವಿಷಯ:-“ಗ್ರಂಥಾಲಯದ ಬಗ್ಗೆ, ನ.17 ರಂದು ಬೆಳಗ್ಗೆ 11 ರಿಂದ 1 ಗಂಟೆವರೆಗೆ ಪುಸ್ತಕಗಳನ್ನು ಗುರುತಿಸುವ ಜ್ಞಾಪನಾ ಶಕ್ತಿ ಪರೀಕ್ಷೆ”ಕಾಲೇಜು ವಿದ್ಯಾರ್ಥಿನಿಯರಿಗೆ. ಅಂದು ಮಧ್ಯಾಹ್ನ 2.30ರಿಂದ 5 ಗಂಟೆವರೆಗೆ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜನಪದಗೀತೆ ಮತ್ತು ಭಾವಗೀತೆ ಸ್ಪರ್ಧೆ ನಡೆಯಲಿದೆ.

ಸೂಚನೆಗಳು: ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾಥಿಗಳು ಶಾಲಾ ಮುಖ್ಯೋಪಾಧ್ಯಾಯರ / ಕಾಲೇಜು ಪ್ರಾಂಶುಪಾಲರ ಅನುಮತಿ ಪತ್ರವನ್ನು ತರಬೇಕು, ಒಂದು ಶಾಲೆ / ಕಾಲೇಜಿನಿಂದ ಒಂದು ಸ್ಪರ್ಧೆಗೆ ನಾಲ್ಕು(5) ವಿದ್ಯಾರ್ಥಿಗಳು ಭಾಗವಹಿಸಬಹುದು, ಹೆಸರುಗಳನ್ನು ದಿನಾಂಕ:-15-11-2018 ಸಮಯ ಸಂಜೆ 5:30 ರ ವರೆಗೆ ನೊಂದಾಯಿಸಿಕೊಳ್ಳಬಹುದು. ಬರೆಯಲು ಹಾಳೆಗಳನ್ನು ಮಾತ್ರ ಕೊಡಲಾಗುವುದು, ಆದರೆ ಪೆನ್ನು, ರಟ್ಟು, ಬಣ್ಣದ ಸಾಮಾಗ್ರಿ ಇತ್ಯಾದಿಗಳನ್ನು ಸ್ಪರ್ಧಾರ್ಥಿಗಳೇ ತರಬೇಕು, ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ಹೆಸರುಗಳನ್ನು ಕಚೇರಿ ಸೂಚನ ಫಲಕದಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಾಸನ ನಗರ ಕೇಂದ್ರ ಗ್ರಂಥಾಲಯದ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ (ದೂರವಾಣಿ ಸಂಖ್ಯೆ 08172-260308) ಮಾಹಿತಿ ಪಡೆಯಬಹುದು. (ಎನ್.ಬಿ)

Leave a Reply

comments

Related Articles

error: