ಮೈಸೂರು

ಗಾಂಧೀಜಿಯವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಪ್ರೊ.ಷಬೀರ್ ಮುಸ್ತಫಾ

ಗಾಂಧೀಜಿಯವರ ತತ್ವಾದರ್ಶಗಳನ್ನು, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಂಕಷ್ಟಗಳು ದೂರವಾಗುತ್ತವೆ ಎಂದು ಪ್ರಗತಿಪರ ಚಿಂತಕ ಪ್ರೊ.ಷಬೀರ್ ಮುಸ್ತಫಾ ತಿಳಿಸಿದರು.

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಾಂಧೀ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಗಾಂಧೀಜಿ ಮತ್ತು ಜಾಗತೀಕರಣ ವಿಷಯ ಕುರಿತ ವಿಶೇಷ ಉಪನ್ಯಾಸ, ಸಂವಾದ ಮತ್ತು ನಗರ ಮಟ್ಟದ ಅಂತರ ಕಾಲೇಜು ಪ್ರೌಢಶಾಲಾ ಪ್ರಬಂಧ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರೊ.ಷಬೀರ್ ಮುಸ್ತಫಾ ಪಾಲ್ಗೊಂಡು ಮಾತನಾಡಿದರು.

ಗಾಂಧೀಜಿಯವರಿಗೆ ಧರ್ಮವೆಂದರೆ ಕರುಣೆ, ಅನುಕಂಪವಾಗಿತ್ತು. ಅವರು ವರ್ಗ, ವರ್ಣ, ಜಾತಿ, ಧರ್ಮವನ್ನು ಮೀರಿ ನಿಂತಿದ್ದರು ಎಂದು ತಿಳಿಸಿದರು.

ಕನ್ನಡ ವಿಕಾಸ ವಿದ್ಯಾಸಂಸ್ಥೆ ಅಧ್ಯಕ್ಷ  ಪ.ಮಲ್ಲೇಶ್ ಮಾತನಾಡಿ, ಜನಪ್ರತಿನಿಧಿಗಳು ಗಾಂಧೀಜಿ ಅವರನ್ನು ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದರಲ್ಲದೇ, ಅವರ ಹೋರಾಟ ಮತ್ತು ಬದುಕು ಜಗತ್ತಿನ ಮತ್ತೊಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ ಎಂದು ತಿಳಿಸಿದರು.

ಸಂಗೀತ ವಿಶ್ವವಿದ್ಯಾನಿಲಯ ಕುಲಪತಿ ಡಾ. ಸರ್ವಮಂಗಳಾ ಶಂಕರ್ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಗಾಂಧೀ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ಎಸ್. ಶಿವರಾಜಪ್ಪ, ಕನ್ನಡ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸ.ರ. ಸುದರ್ಶನ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: