ಮೈಸೂರು

ದಡದಕಲ್ಲಹಳ್ಳಿ ಗ್ರಾಮದ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಸಚಿವ ಹೆಚ್.ಡಿ.ರೇವಣ್ಣ ಭೇಟಿ

ಮೈಸೂರು,ನ.16:- ಮೈಸೂರು ತಾಲೂಕಿನ ಇಲವಾಲ ಹೋಬಳಿ ದಡದಕಲ್ಲಹಳ್ಳಿ ಗ್ರಾಮದಲ್ಲಿ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಮತ್ತು ವಿಭವಮೂರ್ತಿ ಉತ್ಸವಮೂರ್ತಿ, ವಿಮಾನ ಗೋಪುರ,ಗರುಡ,ಹನುಮ ಗರುಡಗಂಭ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ದೇವಸ್ಥಾನಕ್ಕೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ, ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಜಿ.ಡಿ.ಹರೀಶ್ ಗೌಡ ಕೂಡ ಉಪಸ್ಥಿತರಿದ್ದರು, ವಿಶೇಷ ಪೂಜೆ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: