ಸುದ್ದಿ ಸಂಕ್ಷಿಪ್ತ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಮೈಸೂರು,ನ.16-ಅಂಧ ಹಾಗೂ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಸಂಬಂಧ ನ.24 ರಂದು ಜಿಲ್ಲಾ ಮಟ್ಟದಲ್ಲಿ ಎಲ್ಲಾ ವಿಧದ ವಿಶೇಷಚೇತನರಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ನ.24 ರಂದು ಬೆಳಿಗ್ಗೆ 9 ಗಂಟೆಯಿಂದ ಅಂಧ ಹಾಗೂ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆ, ತಿಲಕ್‍ನಗರ, ಮೈಸೂರು ಇಲ್ಲಿ ಏರ್ಪಡಿಸಲಾಗಿದ್ದು, ಆಸಕ್ತ ವಿಶೇಷಚೇತನರು ನ.20 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ಹೆಚ್ಚಿನ ಮಾಹಿತಿಗೆ ದೂ.ಸಂ. 0821-2490111 ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: