ದೇಶಪ್ರಮುಖ ಸುದ್ದಿ

ತೆಲಂಗಾಣ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಹೈದರಾಬಾದ್ (ನ.16): ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತನ್ನ 20 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.

ಇದರೊಂದಿಗೆ ಒಟ್ಟು 119 ಕ್ಷೇತ್ರಗಳಲ್ಲಿ 86 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪಕ್ಷವು ಘೋಷಣೆ ಮಾಡಿದಂತಾಗಿದೆ. ಅ.20 ರಂದು 28 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ನವೆಂಬರ್ 03 ರಂದು ಎರಡನೇ ಪಟ್ಟಿ ಬಿಡುಗಡೆ ಮಾಡಿತ್ತು.

ತೆಲಂಗಾಣ ರಾಷ್ಟ್ರೀಯ ಸಮಿತಿ -ಟಿ.ಆರ್.ಎಸ್ ಕೂಡ ತನ್ನ 10 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಗುರುವಾರ ಮಾಡಿದೆ. ಇದಕ್ಕೂ ಮುನ್ನ 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಟಿ.ಆರ್.ಎಸ್ ಬಿಡುಗಡೆ ಮಾಡಿತ್ತು.

119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ.ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ. (ಎನ್.ಬಿ)

Leave a Reply

comments

Related Articles

error: