ಮೈಸೂರು

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ : ಪುಷ್ಪಲತಾ ಜಗನ್ನಾಥ್ ಬಹುತೇಕ ಖಚಿತ

ಮೈಸೂರು,ನ.17:- ಮೈಸೂರು ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆದಿದ್ದು, ನೂತನ ಮೇಯರ್ ಆಗಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪುಷ್ಪಲತಾ ಜಗನ್ನಾಥ್ ಆಯ್ಕೆ ಬಹುತೇಕ ಖಚಿತಗೊಂಡಿದೆ.

ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸುನಂದಾ ಪಾಲನೇತ್ರ ಉಮೇದುವಾರಿಕೆ ಸಲ್ಲಿಸಿದ್ದು,‌ ಉಪಮೇಯರ್ ಸ್ಥಾನಕ್ಕೆ ಸತೀಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ಬಹುಮತ ಇಲ್ಲದಿದ್ದರೂ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರೇ  ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಬಹುಮತವಿಲ್ಲ. ಅದಕ್ಕಾಗಿ ಕಾಂಗ್ರೆಸ್ ನಿಂದ ಪುಷ್ಪಲತಾ ಜಗನ್ನಾಥ್ ಆಯ್ಕೆ ಖಚಿತವಾಗಿದೆ.

ಈ ಸಂದರ್ಭ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ಹಠ ಈ ಚುನಾವಣೆಯಲ್ಲಿ ಗೆದ್ದಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಗೆ ಅಧಿಕಾರ ಇರಲಿಲ್ಲ. ಮೈತ್ರಿ ಸರ್ಕಾರದಿಂದ ಈಗ ಮೇಯರ್ ಅಧಿಕಾರ ಸಿಕ್ಕಿದೆ. ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಈ ಹಿಂದೆ ಉಪ ಮೇಯರ್ ಆಗಿ ಕೂಡ ಕೆಲಸ ಮಾಡಿದ್ದೇನೆ. ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.

ಜೆಡಿಎಸ್ ನ ಶಫಿ ಅಹ್ಮದ್ ಉಪಮೇಯರ್ ಆಗಿ ಆಯ್ಕೆಗೊಳ್ಳುವುದು ಬಹುತೇಕ ಖಚಿತವಾಗಿದೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: