ಮೈಸೂರು

ಮೇಯರ್ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ : ಸಚಿವ ಸಾ.ರಾ.ಮಹೇಶ್

ಮೈಸೂರು,ನ.17:- ಮೈಸೂರು ಮೇಯರ್ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ನಮ್ಮೆಲ್ಲರಿಗಿಂತ ದೊಡ್ಡವರು. ಮಾಜಿ ಮುಖ್ಯಮಂತ್ರಿ ಆಗಿದ್ದವರು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅವರ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ. ಮೇಯರ್ ಆಯ್ಕೆ ಸಂಬಂಧ ಕಾಂಗ್ರೆಸ್ ನಮ್ಮ ವರಿಷ್ಠರಿಗೆ ಮನವಿ ಮಾಡಿದ್ದರು. ಅದರಂತೆ ನಮ್ಮ ವರಿಷ್ಠರು ಮೇಯರ್ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಮೊದಲ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್, ಎರಡನೇ, ನಾಲ್ಕನೇ ಹಾಗೂ ಐದನೇ ಅವಧಿಗೆ ಜೆಡಿಎಸ್ ಪಕ್ಷದಿಂದ ಮೇಯರ್ ಆಗಲಿದ್ದಾರೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: