ಮೈಸೂರು

ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಮೈಸೂರು ನ್ಯಾಯಾಲಯದ ಆವರಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ  ವ್ಯಕ್ತಿಯೋರ್ವನನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೂಲತಃ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದ ನಿವಾಸಿಯಾದ, ಪ್ರಸ್ತುತ ಮಂಡಿಮೊಹಲ್ಲಾದಲ್ಲಿ ವಾಸಿಸುತ್ತಿರುವ  ಸೈಯದ್ ಅಪ್ಜಲ್ (18) ಎಂಬಾತನೇ ನ್ಯಾಯಾಲಯದ ಆವರಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಇದೀಗ ಲಕ್ಷ್ಮಿಪುರಂ ಪೋಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರು ನ್ಯಾಯಾಲಯದ ಆವರಣದಲ್ಲಿ  ಪರಿಚಯವಿಲ್ಲದ ವ್ಯಕ್ತಿಯೋರ್ವ ತಿರುಗಾಡುತ್ತಿದ್ದಾನೆ ಎಂದು ಮಾಹಿತಿ ನೀಡಿದ್ದರು. ಅವರ ಮಾಹಿತಿಯ ಮೇರೆಗೆ ಅಫ್ಜಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply

comments

Related Articles

error: