ಮೈಸೂರು

ಪಾಲಿಕೆಯ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಮೈಸೂರು,ನ.17:-  ಮೈಸೂರು ಮಹಾನಗರ ಪಾಲಿಕೆಗಿಂದು ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು,  ಚುನಾವಣೆಗೆ ಸಂಸದ ಪ್ರತಾಪ್ ಸಿಂಹ ಗೈರಾಗಿದ್ದಾರೆ.

ಬಿಜೆಪಿ ಶಾಸಕರು,  ಪಾಲಿಕೆ ಸದಸ್ಯರು ಹಾಜರಾಗಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಬಳಿಕ ಮೊದಲಿಗೆ ನೂತನ ಪಾಲಿಕೆ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಯಿತು. ತಲಾ ಐದೈದು  ಸದಸ್ಯರಂತೆ ಪ್ರಮಾಣ ವಚನ ಸ್ವೀಕರಿಸಿದರು. ಮೊದಲನೇ  ವಾರ್ಡ್ ನಿಂದ  ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯ ಆರಂಭಗೊಂಡಿತ್ತು.

ಮಾಜಿ ಸಿಎಂ ಸಿದ್ದರಾಮಯ್ಯ,  ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೆಸರಿನಲ್ಲಿ ಪಾಲಿಕೆ ಸದಸ್ಯೆ ಶೋಭಾ ಸುನೀಲ್ ಪ್ರಮಾಣ ವಚನ ಸ್ವೀಕರಿಸಿದರು. ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

ನೂತನ ಪಾಲಿಕೆ ಸದಸ್ಯರ ಪ್ರಮಾಣವಚನ ಸ್ವೀಕಾರ ಮುಕ್ತಾಯಗೊಂಡಿದ್ದು, ಮೇಯರ್ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ. ಪ್ರಾದೇಶಿಕ ಆಯುಕ್ತ ಯಶ್ವಂತ್ ನೇತೃತ್ವದಲ್ಲಿ ಪಾಲಿಕೆ ಮೇಯರ್ ಚುನಾವಣೆ ನಡೆಯುತ್ತಿದೆ.

ಪ್ರಾದೇಶಿಕ ಆಯುಕ್ತ ಯಶ್ವಂತ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್, ಮನಪಾ ಆಯುಕ್ತ ಜಗದೀಶ್, ಎ.ಸಿ.ರೂಪಾ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: