ಮೈಸೂರು

ಸಚಿವರ ನಿಧನಕ್ಕೆ ಕಂಬನಿ ಮಿಡಿದ ಜೆ.ಎಸ್.ಎಸ್ ಕಾಲೇಜು ಶಿಕ್ಷಕ ವೃಂದ

ಮೈಸೂರಿನ ಬಿ.ಎನ್ ರಸ್ತೆಯಲ್ಲಿರುವ ಜೆ.ಎಸ್.ಎಸ್. ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಅಗಲಿದ ಸಕ್ಕರೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಮೌನ ಆಚರಿಸಲಾಯಿತು.

ಹಿರಿಯ ವಿದ್ಯಾರ್ಥಿಗಳು ಹಾಗೂ ರಾಜ್ಯ ಸಹಕಾರ, ಸಕ್ಕರೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್‍ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿರುವುದು ತುಂಬಾ ನೋವಿನ ಸಂಗತಿಯಾಗಿದೆ. ಕಾಲೇಜಿನ ದಿನಗಳಲ್ಲಿಯೇ ವಿದ್ಯಾರ್ಥಿ ಸಂಘದ  ಚುನಾವಣೆಗಳಲ್ಲಿ ಸ್ಪರ್ಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ತಮ್ಮ ಸಂಘಟನಾ ಶಕ್ತಿಯನ್ನು ಸಾಬೀತು ಪಡಿಸಿದ್ದರು. ಗುಂಡ್ಲುಪೇಟೆ ಕ್ಷೇತ್ರದಿಂದ ಸತತವಾಗಿ 5 ಬಾರಿ ರಾಜ್ಯ ವಿಧಾನ ಸಭೆಗೆ ಆಯ್ಕೆಯಾಗುವ ಮೂಲಕ ಜನಪ್ರಿಯ ನಾಯಕರಾಗಿದ್ದರು. ಈ ಹಿಂದೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಪೂರೈಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರಾಗಿಯೂ ಸಾರ್ಥಕ ಸೇವೆಯನ್ನು ಸಲ್ಲಿಸಿದ್ದರು. ತಮ್ಮದೇ ಅದ ‘ಸಂಗಮ ಪ್ರತಿಷ್ಠಾನ’ವನ್ನು ಸ್ಥಾಪಿಸಿ ಅದರ ಮೂಲಕ ಉಚಿತ ಸಾಮೂಹಿಕ ವಿವಾಹ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲೆಂದು ಮತ್ತು ಅವರ ಕುಟುಂಬ ವರ್ಗದವರಿಗೆ ಇವರ ಅಗಲಿಕೆಯ ದುಖಃವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಮುಖ್ಯ ಕಾರ್ಯನಿರ್ವಾಹಕರು, ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿವೃಂದ ಸಚಿವರ ನಿಧನಕ್ಕೆ ಕಂಬನಿ ಮಿಡಿದಿದೆ.

Leave a Reply

comments

Related Articles

error: