
ಮೈಸೂರು
ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿ
ಮೈಸೂರು,ನ.17:- ವಾಯುವಿಹಾರಕ್ಕೆ ತೆರಳಿದ ವೇಳೆ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕಸಿದು ಪರಾರಿಯಾದ ಘಟನೆ ಸರಸ್ವತಿಪುರಂ ನಲ್ಲಿ ನಡೆದಿದೆ.
ಸರಸ್ವತಿಪುರಂ ನಿವಾಸಿ ಉಮಾ 33ಗ್ರಾಂ ತೂಕದ ಮಾಂಗಲ್ಯ ಸರ ಕಳೆದುಕೊಂಡವರಾಗಿದ್ದಾರೆ. ಇವರು ಸರಸ್ವತಿಪುರಂನ ಸಂಜೀವಿನಿ ಉದ್ಯಾನವನಕ್ಕೆ ವಾಯುವಿಹಾರಕ್ಕೆಂದು ತೆರಳಿದ್ದು, ಅಲ್ಲಿಂದ ವಾಪಸ್ಸಾಗುತ್ತಿದ್ದ ವೇಳೆ ಸ್ಕೂಟರ್ ನಲ್ಲಿ ಬಂದ ಇಬ್ಬರ ಪೈಕಿ ಓರ್ವ ಸರ ಕಸಿದು ಪರಾರಿಯಾಗಿದ್ದಾನೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)