ಸುದ್ದಿ ಸಂಕ್ಷಿಪ್ತ

ಬೇಲೂರು ಕ.ಸಾ.ಪ ಅಧ್ಯಕ್ಷರಾಗಿ ಪತ್ರಕರ್ತ ಬಿ.ಎಂ.ರವೀಶ್ ನೇಮಕ

ಹಾಸನ ನ.(17): ಬೇಲೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನಾಗಿ ಪತ್ರಕರ್ತ ಬಿ.ಎಂ.ರವೀಶ್ ಅವರನ್ನು ನೇಮಕ ಮಾಡಲಾಗಿದೆ. ಎಚ್.ಎಂ.ದಯಾನಂದ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಬಿ.ಎಂ.ರವೀಶ್ ಅವರನ್ನು ನೇಮಕ ಮಾಡಿದ್ದಾರೆ.

ಬುಧವಾರ ಸಂಜೆ ಬಿ.ಎಂ.ರವೀಶ್ ಅವರಿಗೆ ನಾಯಕರಹಳ್ಳಿ ಮಂಜೇಗೌಡ ನೇಮಕಾತಿ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜಾವಗಲ್ ಪ್ರಸನ್ನ, ಕಸಾಪ ಜಿಲ್ಲಾ ಪ್ರತಿನಿಧಿ ಎಸ್.ಕೆ.ನಾಗೇಶ್, ಪುರಸಭೆ ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್ ಇದ್ದರು. (ಎನ್.ಬಿ)

Leave a Reply

comments

Related Articles

error: