ಮೈಸೂರು

ನ.30ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಮಠದ ಅತಿಥಿ ಗೃಹ ಉದ್ಘಾಟನೆ

ಸಿಎಂ ಕುಮಾರಸ್ವಾಮಿಯಿಂದ ಉದ್ಘಾಟನೆ

ಮೈಸೂರು,ನ.17 : ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುತ್ತೂರು ಶಾಖಾ ಮಠದ ಅತಿಥಿಗೃಹದ ಉದ್ಘಾಟನೆಯು ನ.30ರಂದು ಬೆಳಗ್ಗೆ 11 ಗಂಟೆಗೆ ನೆರವೇರಿಸಲಾಗುವುದು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಾನಿಧ್ಯ ವಹಿಸುವರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೋಕಾರ್ಪಣೆಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಜನಪ್ರತಿನಿಧಿಗಳು ಹಾಜರಿರಲಿದ್ದಾರೆ ಎಂದು ಆಡಳಿತಾಧಿಕಾರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: